ಇಂದಿನ ದಿನಗಳಲ್ಲಿ ನಶಿಸಿಹೋಗುತ್ತಿರುವ ನಮ್ಮ ಸಂಸ್ಕೃತಿ, ಮಾನವೀಯ ಮೌಲ್ಯಗಳನ್ನು ರಕ್ಷಿಸಲು ಕಲೆಗಳು ಸಹಾಯಮಾಡುತ್ತವೆ ಎಂದು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆದ ಗಾನ – ನೃತ್ಯ – ಯಕ್ಷ ಸಂಭ್ರಮ 2017 ರ ಅಧ್ಯಕ್ಷೀಯ ನೆಲೆಯಲ್ಲಿ ಮೇಲಿನ ಮಾತುಗಳನ್ನು ರಿಜಿಸ್ಟಾರ್ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಂಗಳೂರಿನ ಶ್ರೀ ಚಂದ್ರಹಾಸ ರೈಯವರು ನುಡಿದರು. ಅತಿಥಿಗಳಾಗಿ ಆಗಮಿಸಿದ ಶ್ರೀಯುತ ಚಿದಾನಂದ ಕಾಮತ್ ಹಾಗೂ ವಿದುಷಿ ಶ್ರೀಮತಿ ಶೋಭಿತಾ ಸತೀಶ್ರವರು ಸಂದರ್ಬೋಚಿತವಾಗಿ ಮಾತನಾಡಿದರು.


ವೇದಿಕೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀಯುತ ಅಚ್ಯುತ ನಾಯಕ್, ಸಂಚಾಲಕರಾದ ಶ್ರೀಯುತ ವಿನೋದ್ ಕುಮಾರ್ ರೈ ಗುತ್ತು, ಭರತನಾಟ್ಯ ಗುರುಗಳಾದ ವಿದ್ವಾನ್ ಶ್ರೀಯುತ ದೀಪಕ್ ಕುಮಾರ್, ಸಂಗೀತ ಗುರುಗಳಾದ ವಿದುಷಿ ಶ್ರೀಮತಿ ಸುಚಿತ್ರಾ ಹೊಳ್ಳ ಹಾಗೂ ಗಾನ – ನೃತ್ಯ – ಯಕ್ಷ ಸಂಭ್ರಮ ೨೦೧೭ರ ಸಲಹಾ ಸಮಿತಿಯ ಅಧ್ಯಕ್ಷರಾದ ಶ್ರೀ ಪದ್ಮನಾಭರವರು ಮತ್ತು ಕಾರ್ಯಕ್ರಮವನ್ನು ಉದ್ಫಾಟಿಸಿದ ಶಾಲೆಯ ಹಿರಿಯ ವಿದ್ಯಾರ್ಥಿ ನಿಕ್ಷಿತ್ ರವರು ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದಲ್ಲಿ ಭರತನಾಟ್ಯ, ಯಕ್ಷಗಾನ, ಸಂಗೀತ ಗುರುಗಳನ್ನು ಗೌರವಿಸಲಾಯಿತು. ವಿದ್ಯಾರ್ಥಿನಿ ಕೀರ್ತಿ ಕುಡ್ವ ಪ್ರಾರ್ಥಿಸಿ, ಪದ್ಮನಾಭ ರವರು ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ಶ್ರೀಮತಿ ಅನುಷಾ ಕಾರ್ಯಕ್ರಮ ನಿರೂಪಿಸಿ, ಶ್ರೀಮತಿ ಮಂಜುಳಾ ಧನ್ಯವಾದ ಸಲ್ಲಿಸಿದರು.
ಸಭಾ ಕಾರ್ಯಕ್ರಮದ ಮೊದಲು ಮಕ್ಕಳಿಂದ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ನಡೆಯಿತು. ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ವೃಷಕೇತು ವಿಜಯ ಯಕ್ಷಗಾನ ಕಾರ್ಯಕ್ರಮ ನಡೆಯಿತು.