ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ತೆಂಕಿಲ ಇಲ್ಲಿ ದಿನಾಂಕ ೩೦.೦೬.೨೦೧೨ರಂದು ಎಪ್ರಿಲ್, ಮೇ, ಜೂನ್ ತಿಂಗಳಲ್ಲಿ ಜನಿಸಿದ ವಿದ್ಯಾರ್ಥಿಗಳ ಸಾಮೂಹಿಕ ಹುಟ್ಟುಹಬ್ಬವು ನೆರವೇರಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದ ಪೋಷಕರಾದ ಶ್ರೀಮತಿ ಭಾರತಿ ಶಶಿಧರ್ ರವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ವೇದಿಕೆಯಲ್ಲಿ ಉಪಸ್ಥಿತರಿದ್ದ ಶಾಲಾ ಆಡಳಿತ ಮಂಡಳಿ ಸದಸ್ಯರಾದ ಶ್ರೀಜಯರಾಮ್ ಭಟ್ ಮತ್ತು ಶ್ರೀ ಶ್ಯಾಂ ಪ್ರಸಾದ್ ಶಾಸ್ತ್ರೀಯವರು ವಿದ್ಯಾರ್ಥಿಗಳಿಗೆ ಹುಟ್ಟುಹಬ್ಬದ ಆಚರಣೆಯ ಮಹತ್ವದ ಬಗ್ಗೆ ತಿಳಿಸಿದರು. ಹಿರಿಯ ಶಿಕ್ಷಕಿ ಶ್ರೀಮತಿ ಪೂರ್ಣಿಮಾ ಮಾತಾಜಿಯಾವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಶಿಕ್ಷಕಿ ಶ್ರೀಮತಿ ಶ್ವೇತಾರವರು ಧನ್ಯವಾದವನ್ನು ಶಿಕ್ಷಕಿ ಶ್ರೀಮತಿ ವೀಣಾಸರಸ್ವತಿಯವರು ಕಾರ್ಯಕ್ರಮದ ನಿರೂಪಣೆಯನ್ನು ಮಾಡಿದರು.