ಯಕ್ಷಗಾನ ನಾಟ್ಯ ತರಬೇತಿ ಆರಂಭ

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ಇಲ್ಲಿ ದಿನಾಂಕ 9-6-2017 ರಂದು 2017-18 ನೇ ಸಾಲಿನ ಯಕ್ಷಗಾನ ನಾಟ್ಯ ತರಗತಿಯು ಉದ್ಫಾಟನೆಗೊಂಡಿತು. ಈ ಕಾರ್ಯಕ್ರಮದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಅಚ್ಯುತ್ ನಾಯಕ್ ರವರು ದೀಪ ಬೆಳಗಿಸುವುದರ ಮೂಲಕ ನಾಟ್ಯ ತರಗತಿಗೆ ಚಾಲನೆ ನೀಡಿ ಶುಭ ಹಾರೈಸಿದರು. ನಾಟ್ಯಗುರುಗಳಾದ ಶ್ರೀ ಬಾಲಕೃಷ್ಣ ಪೂಜಾರಿ ಉಡ್ಡಂಗಳರವರು ಮತನಾಡಿ ಕರಾವಳಿಯ ಗಂಡುಕಲೆಯನ್ನು ಉಳಿಸಿ ಬೆಳೆಸಿ ಜೀವಂತವಾಗಿರಿಸಿ ಎಂದು ಕರೆಯಿತ್ತರು. ಪೋಷಕರು, ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಯಕ್ಷಗಾನ ತರಬೇತಿಯ ನಿರ್ದೇಶಕರಾದ ಶಿಕ್ಷಕ ಶ್ರೀ ಚಂದ್ರಶೇಖರ ಸುಳ್ಯಪದವುರವರು ಕಾರ್ಯಕ್ರಮ ನಿರೂಪಿಸಿದರು.

yakshagana1

yakshagana2

Highslide for Wordpress Plugin