ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಸಭಾಂಗಣದಲ್ಲಿ 8 ಮತ್ತು 9 ನೇ ತರಗತಿಯ ಮಕ್ಕಳ ಪೋಷಕರ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀಯುತ ಅಚ್ಯುತ್ ನಾಯಕ್ ರವರು ಮಾತೃಭಾಷೆಯ ಶಿಕ್ಷಣದ ಅಗತ್ಯ ಹಾಗೂ ಪ್ರಯೋಜನಗಳನ್ನು ವಿವರಿಸುತ್ತಾ ಈ ಮೇಲಿನ ಮಾತುಗಳನ್ನು ಹೇಳಿದರು.



ವೇದಿಕೆಯಲ್ಲಿ ಶಾಲಾ ಆಡಳಿತ ಮಂಡಳಿ ಸದಸ್ಯ ರಮೇಶ್ಚಂದ್ರ ಮತ್ತು ಶಾಲಾ ಮುಖ್ಯಗುರುಗಳು, ಶಿಕ್ಷಕರು ಉಪಸ್ಥಿತರಿದ್ದರು.
ಶಾಲಾ ಮಕ್ಕಳ ಪ್ರಾರ್ಥನೆಯೊಂದಿಗೆ ಆರಂಭವಾದ ಸಭೆಯಲ್ಲಿ ಶಾಲಾ ಚಟುವಟಿಕೆಗಳು ಮಕ್ಕಳ ಶೈಕ್ಷಣಿಕ ಹಾಗೂ ಆಟೋಟ ವಿಷಯಗಳ ಬಗ್ಗೆ ಹೆತ್ತವರು ಹಾಗೂ ಶಿಕ್ಷಕರು ಪರಸ್ಪರ ಚರ್ಚಿಸಿದರು. ಹಾಗೆಯೇ ಶಿಕ್ಷಕ – ರಕ್ಷಕ ಸಂಘಕ್ಕೆ ಪ್ರಸಕ್ತ ಸಾಲಿನ ಸದಸ್ಯರ ಆಯ್ಕೆಯು ನಡೆಯಿತು. ಶ್ರೀಮತಿ ಪೂರ್ಣಿಮಾ ಮಾತಾಜಿ ಸ್ವಾಗತಿಸಿ, ಕು.ವಿದ್ಯಾಶ್ರೀ ಮಾತಾಜಿ ಧನ್ಯವಾದ ಸಮರ್ಪಿಸಿ ಶ್ರೀಮತಿ ಅನುಷಾ ಮಾತಾಜಿ ಕಾರ್ಯಕ್ರಮ ನಿರೂಪಿಸಿದರು.