ದಿನಾಂಕ ೦೩.೦೭.೨೦೧೨ ರಂದು ವಿವೇಕಾನಂದ ಕನ್ನಡ ಮಾಧ್ಯಮ ಮತ್ತು ಆಂಗ್ಲ ಮಾಧ್ಯಮದ ಜಂಟಿ ಆಶ್ರಯದಲ್ಲಿ ಗುರುಪೂರ್ಣಿಮೆ ಆಚರಣೆಯು ಶಾಲೆಯ ಸಭಾಂಗಣದಲ್ಲಿ ಜರುಗಿತು.ಈ ಕಾರ್ಯಕ್ರಮದಲ್ಲಿ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಸಂಸ್ಕೃತ ಪ್ರಾಧ್ಯಾಪಕರಾದ ಶ್ರೀ ಪರೀಕ್ಷಿತ ತೋಳ್ಪಾಡಿಯವರು ಮಾತನಾಡಿ ‘ಗುರುಗಳು ವಿದ್ಯಾರ್ಥಿಗಳಿಗೆ ಜ್ಞಾನವನ್ನು ಬೆಳಂದಿಗಳಾಗಿ ಪರಿವರ್ತಿಸಿ ಕೊಡುವವರಾಗಬೇಕು’ ಎಂದು ಹೇಳಿ ಗುರುಪೂರ್ಣಿಮೆಯ ಮಹತ್ವದ ಬಗ್ಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿಯ ಸದಸ್ಯರಾದ ಶ್ರೀಮತಿ ಶೋಭಾ ಕೊಳತ್ತಾಯ ರವರು ಉಪಸ್ಥಿತರಿದ್ದರು. ಹಾಗೂ ಉಭಯ ಸಂಸ್ಥೆಗಳ ಮುಖ್ಯ ಗುರುಗಳು ಉಪಸ್ಥಿತರಿದ್ದರು.