ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ತೆಂಕಿಲದಲ್ಲಿ ನಡೆದ ಹಿರಿಯ ವಿದ್ಯಾರ್ಥಿಗಳ ಸಭೆಯಲ್ಲಿ ಈ ವರ್ಷ ನಡೆಯುವ ’ಬೆಳ್ಳಿಹಬ್ಬ’ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಲಾಯಿತು. ಬಳಿಕ ಹೊಸ ವಿದ್ಯಾರ್ಥಿ ಸಂಘವನ್ನು ರಚಿಸಲಾಯಿತು. ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಶ್ರೀ ವಿರೂಪಾಕ್ಷ, ಉಪಾಧ್ಯಕ್ಷರಾಗಿ ಶ್ರೀಮತಿ ದೀಪಿಕಾ, ಕಾರ್ಯದರ್ಶಿಯಾಗಿ ಶ್ರೀ ವಿನೋದ್ರವನ್ನು ಸರ್ವಾನುಮತದಿಂದ ನೇಮಿಸಲಾಯಿತು. ಈ ಹಿಂದಿನ ಅಧ್ಯಕ್ಷರಾದ ಶ್ರೀ ಅನೀಶ್ ಬಡೆಕ್ಕಿಲರವರನ್ನು ಗೌರವ ಅಧ್ಯಕ್ಷರನ್ನಾಗಿ ನೇಮಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ಅಧ್ಯಕ್ಷರಾದ ಶ್ರೀ ಅಚ್ಯುತ ನಾಯಕ್ ಮಾತನಾಡಿ ಹಿರಿಯ ವಿದ್ಯಾರ್ಥಿಗಳು ಶಾಲೆಯ ಪ್ರಗತಿಗೆ ಸಹಾಯಕರಾಗಿರುವವರು ನಿಮ್ಮ ಸಹಭಾಗಿತ್ವವು ಶಾಲೆಗೆ ಅತ್ಯಗತ್ಯ ಎಂದು ನುಡಿದರು. ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿ ಕೋಶಾಧಿಕಾರಿಯಾದ ಶ್ರೀ ವಸಂತ ಸುವರ್ಣ ಹಾಗೂ ಮುಖ್ಯಗುರುಗಳಾದ ಶ್ರೀಮತಿ ಆಶಾ ಬೆಳ್ಳಾರೆ ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.