ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ತೆಂಕಿಲ ಇಲ್ಲಿ ದಿನಾಂಕ ೦೪/೦೭/೨೦೧೨ ರಂದು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಭಾರತೀಯ ಸಂಸ್ಕೃತಿಯಲ್ಲಿ ವಿಜ್ಞಾನದ ಮಹತ್ವ ವಿಷಯದಲ್ಲಿ ಕರ್ನಾಟಕ ಸರಕಾರದ ಮದ್ಯಪಾನ ಸಂಯಮ ಮಂಡಳಿಯ ಅಧ್ಯಕ್ಷರಾದ ಶ್ರೀ ಸಚ್ಚಿದನಾಂದ ಹೆಗಡೆಯವರು ಮಾತನಾಡಿದರು. ಮೂಢನಂಬಿಕೆ, ತಪಸ್ಸುಗಳಿಗೆ ವೈಜ್ಞಾನಿಕ ಆಧಾರಗಳಿವೆ ಎಂಬುದನ್ನು ವಿದ್ಯಾರ್ಥಿಗಳಲ್ಲಿ ಚರ್ಚೆಯ ಮೂಲಕ ವಿವರಿಸಿದರು.
ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿಯ ಸದಸ್ಯರಾದ ಶ್ರೀ ಶ್ಯಾಂಪ್ರಸಾದ್ ಶಾಸ್ತ್ರಿಯವರು ಉಪಸ್ಥಿತರಿದ್ದರು. ಮುಖ್ಯಗುರುಗಳಾದ ಶ್ರೀಮತಿ ಆಶಾ ಬೆಳ್ಳಾರೆಯವರು ಸ್ವಾಗತಿಸಿದರು.