ಕ್ರೀಡಾ ಶಿಕ್ಷಣದ ಜೊತೆಗೆ ನೈತಿಕ ವಿಚಾರ ಅಳವಡಿಸಿಕೊಂಡಾಗ ಸಾಧನೆಗೆ ಗೌರವ ಹಾಗೂ ಮನ್ನಣೆ

ವಿದ್ಯಾಭಾರತಿ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ವಿವೇಕಾನಂದ ಕನ್ನದ ಮಾಧ್ಯಮ ಶಾಲೆ ಪುತ್ತೂರು ಇದರ ಆಶ್ರಯದಲ್ಲಿ ನಡೆದ ದಕ್ಷಿಣ ಮಧ್ಯಕ್ಷೇತ್ರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟವನ್ನು ದರ್ಬೆ ಅಧಿಕಾರಿಗಳ ಕ್ಲಬ್‌ನಲ್ಲಿ ಪುತ್ತೂರು ಉಪವಿಭಾಗದ ಅಧಿಕಾರಿಗಳಾದ ಶ್ರೀ ಎಚ್. ಕೆ. ಕೃಷ್ಣಮೂರ್ತಿ ಉದ್ಘಾಟಿಸಿ ಮಕ್ಕಳು ಆಸಕ್ತಿಯಿಂದ ಪಾಲ್ಗೊಳ್ಳುವುದು ನೋಡುವುದೇ ಮನಸ್ಸಿಗೆ ಮುದ ನೀಡುತ್ತದೆ. ಇನ್ನೂ ಹೆಚ್ಚಿನ ಮಕ್ಕಳು ಕ್ರೀಡಾಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಬೇಕು ಎಂದು ಶುಭ ಹಾರೈಸಿದರು.

Badminton (2)

Badminton (3)

Badminton (1)

ಶಿಕ್ಷಣದ ಜೊತೆಗೆ ಶಾರೀರಿಕ ಶಿಕ್ಷಣವನ್ನು ಅಳವಡಿಸಿ ಮಗುವಿನ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಿ ಕ್ರೀಡಾಕ್ಷೇತ್ರದಲ್ಲಿ ಬೆಳಗುವಂತೆ ಮಾಡುವಲ್ಲಿ ವಿದ್ಯಾಭಾರತಿಯ ಕೊಡುಗೆ ಅನನ್ಯ ಎಂದು ವಿದ್ಯಾಭಾರತಿ ಪ್ರಾಂತ ಕಾರ್ಯದರ್ಶಿಗಳು ಹಾಗೂ ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕ ಇಲ್ಲಿನ ಶ್ರೀ ವಸಂತ ಮಾಧವರು ನುಡಿದರು.

ಅಧ್ಯಕ್ಷತೆ ವಹಿಸಿದ ಶಾಲಾ ಸಂಚಾಲಕರಾದ ಶ್ರೀ ರವಿನಾರಯಣರು ಮಾತನಾಡಿ ಕ್ರೀಡಾಸಕ್ತಿಯ ಜೊತೆಗೆ ಮೌಲ್ಯಶಿಕ್ಷಣವನ್ನು ಅಳವಡಿಸಿಕೊಂಡು ಜೀವನ ಮುಂದುವರಿಸಿದಾಗ ನಮ್ಮ ಸಾಧನೆಗೆ ಉತ್ತಮ ಗೌರವ ಹಾಗೂ ಮನ್ನಣೆ ಸಿಗುವುದು ಜೊತೆಗೆ ಜೀವನ ಅರ್ಥಪೂರ್ಣವಾಗುವುದು ಎಂದರು.

ವೇದಿಕೆಯಲ್ಲಿ ವಿದ್ಯಾಭಾರತಿ ಪ್ರಾಂತ ನೈತಿಕ ಆಧ್ಯಾತ್ಮಿಕ ಶಿಕ್ಷಣ ಪ್ರಮುಖರಾದ ವೆಂಕಟರಮಣ ರಾವ್ ಮಂಕುಡೆ ಹಾಗೂ ಪುತ್ತೂರು ತಾಲೂಕು ಪಂಚಾಯತ್‌ನ ಸಾಮಾಜಿಕ ನ್ಯಾಯ ಸಮಿತಿಯ ಅಧ್ಯಕ್ಷರಾದ ಶ್ರೀ ಹರೀಶ್ ಬಿಜತ್ರೆ, ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಅಚ್ಯುತ್ ನಾಯಕ್ ಸ್ವಾಗತಿಸಿ ಸದಸ್ಯರಾದ ವಸಂತ ಸುವರ್ಣ, ಪ್ರಾಥಮಿಕ ವಿಭಾಗದ ಮುಖ್ಯಗುರುಗಳಾದ ನಳಿನಿ ವಾಗ್ಲೆ ಉಪಸ್ಥಿತರಿದ್ದರು. ಶಿಕ್ಷಕಿ ಕು. ಧನ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು.

ದಕ್ಷಿಣ ಮಧ್ಯ ಕ್ಷೇತ್ರಿಯ ವ್ಯಾಪ್ತಿಗೆ ಒಳಪಡುವ ಮಂಗಳೂರು, ಬೆಂಗಳೂರು, ತೆಲಂಗಾಣ ಹಾಗೂ ಆಂದ್ರಪ್ರದೇಶದ ವಿದ್ಯಾರ್ಥಿಗಳು ಪಂದ್ಯಾಟದಲ್ಲಿ ಪಾಲ್ಗೊಂಡಿದ್ದರು.

Highslide for Wordpress Plugin