ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ – ರಾಜ್ಯಮಟ್ಟಕ್ಕೆ ಆಯ್ಕೆ

ಸಾರ್ವಜನಿಕ ಶಿಕ್ಷಣ ಇಲಾಖೆ ದ.ಕ ಮತ್ತು ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆ ಮಾಣಿ, ಬಂಟ್ವಾಳ ತಾಲೂಕು ಇವರ ಸಂಯುಕ್ತ ಆಶ್ರಯದಲ್ಲಿ ನಡೆದಂತಹ ದಕ್ಷಿಣಕನ್ನಡ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ 2019-20 ಇದರಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಶಿಶಿರ್ ಎಸ್, ಕೌಶಿಕ್ ಎ.ಜಿ, ಸಮೀಕ್ಷಾ, ಮುಖೇಶ್ ಕೃಷ್ಣ ಇವರ ತಂಡ ಕಲೋತ್ಸವ ದೃಶ್ಯ ಕಲೆ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತದೆ. ಮತ್ತು ಪ್ರೌಢಶಾಲಾ ವೈಯಕ್ತಿಕ ಯಕ್ಷಗಾನ ಸ್ಪರ್ಧೆಯಲ್ಲಿ ಕು. ಶ್ರೇಯಾ ಪ್ರಥಮ ಸ್ಥಾನ ಹಾಗೂ ಪ್ರಾಥಮಿಕ ವಿಭಾಗದ ವೈಯಕ್ತಿಕ ಯಕ್ಷಗಾನ ಸ್ಪರ್ಧೆಯಲ್ಲಿ ಕು.ಅವನಿ ಬೆಳ್ಳಾರೆ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.

Shreya

Avani-Bellare

Drushya-Kale-Team

shrey

Highslide for Wordpress Plugin