ಕಲಾಶ್ರೀ – ರಾಜ್ಯಮಟ್ಟಕ್ಕೆ ಆಯ್ಕೆ

SHREYA-Aಮಕ್ಕಳ ಮತ್ತು ಮಹಿಳಾ ಕಲ್ಯಾಣ ಇಲಾಖೆಯ ವತಿಯಿಂದ ನಡೆದ ಜಿಲ್ಲಾಮಟ್ಟದ ’ಕಲಾಶ್ರೀ’ ಆಯ್ಕೆ ಶಿಬಿರದಲ್ಲಿ ಭಾಗವಹಿಸಿದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಶ್ರೇಯಾ ಆಚಾರ್ ’ಸೃಜನಾತ್ಮಕ ಪ್ರದರ್ಶನ’ ವಿಭಾಗದ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದ ’ಕಲಾಶ್ರೀ’ ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ. ಅಲ್ಲದೆ ಜಿಲ್ಲಾಮಟ್ಟದ ಪ್ರೌಢಶಾಲಾ ವಿಭಾಗದ ಪ್ರತಿಭಾಕಾರಂಜಿ ವೈಯಕ್ತಿಕ ಯಕ್ಷಗಾನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ. ಈಕೆ ಯಕ್ಷಗಾನ ಅಭ್ಯಾಸವನ್ನು ಶಾಲಾ ಸಹಶಿಕ್ಷಕರಾದ ಶ್ರೀ ಚಂದ್ರಶೇಖರ ಸುಳ್ಯಪದವು ಹಾಗೂ ಶ್ರೀ ಬಾಲಕೃಷ್ಣ ಪೂಜಾರಿ ಉಡ್ಡಂಗಳ ಇವರಿಂದ ಪಡೆಯುತ್ತಿದ್ದಾಳೆ.

Highslide for Wordpress Plugin