ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ, ಆಂಗ್ಲ ಮಾಧ್ಯಮ ಶಾಲೆಗಳು. ನರೇಂದ್ರ ಪದವಿಪೂರ್ವ ಕಾಲೇಜು, ವಿವೇಕಾನಂದ ಬಿ. ಎಡ್. ಕಾಲೇಜು ಇವುಗಳ ಜಂಟಿ ಆಶ್ರಯದಲ್ಲಿ ಗಣರಾಜ್ಯೋತ್ಸವ ಆಚರಿಸಲಾಯಿತು. ಧ್ವಜಾರೋಹಣವನ್ನು ನಿವೃತ್ತ ಸೇನಾಧಿಕಾರಿ ಕರ್ನಲ್ ಡಿ. ಜಿ. ಭಟ್ ಇವರು ನೆರವೇರಿಸಿ ಮಾತನಾಡಿದರು.









ಮುಖ್ಯ ಅತಿಥಿಯಾಗಿದ್ದ ನಿವೃತ್ತ ಕೆ.ಎಸ್.ಆರ್.ಪಿ. ರಾಮದಾಸ್ ಗಣರಾಜ್ಯೋತ್ಸವದ ಸಂದೇಶವನ್ನು ಸಾರಿದರು. ವಿವೇಕಾನಂದ ಆಂಗ್ಲಮಾಧ್ಯಮ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಡಾ. ಶಿವಪ್ರಕಾಶ್ ಅಧ್ಯಕ್ಷತೆ ವಹಿಸಿದ್ದರು. ಪ್ರಾರಂಭದಲ್ಲಿ ವಿವೇಕಾನಂದ ಕನ್ನಡ ಮತ್ತು ಆಂಗ್ಲಮಾಧ್ಯಮ ಶಾಲೆಗಳ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಂದ ಸಾಮೂಹಿಕ ಸಮತ ನಡೆಯಿತು. ಕಾರ್ಯಕ್ರಮದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ, ಆಂಗ್ಲ ಮಾಧ್ಯಮ ಶಾಲೆಗಳು. ನರೇಂದ್ರ ಪದವಿಪೂರ್ವ ಕಾಲೇಜು, ವಿವೇಕಾನಂದ ಬಿ.ಎಡ್. ಕಾಲೇಜು ಇದರ ಆಡಳಿತ ಮಂಡಳಿಯ ಅಧ್ಯಕ್ಷರು, ಸಂಚಾಲಕರು, ಸದಸ್ಯರು, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರು ಮತ್ತು ಸದಸ್ಯರು, ಪೋಷಕರು, ಮುಖ್ಯೋಪಾಧ್ಯಾಯರುಗಳು, ಪ್ರಾಂಶುಪಾಲರುಗಳು, ಶಿಕ್ಷಕ-ಶಿಕ್ಷಕೇತರ ವೃಂದ, ವಿದ್ಯಾರ್ಥಿ ವೃಂದ ಉಪಸ್ಥಿತರಿದ್ದರು.
ದೈಹಿಕ ಶಿಕ್ಷಣ ಶಿಕ್ಷಕ ದೀಪಕ್ ಅವರು ಘೋಷಣೆಗಳನ್ನು ಹಾಗೂ ಸಾಮೂಹಿಕ ಸಮತ ನೆರವೇರಿಸಿ ಕೊಟ್ಟರು. ನರೇಂದ್ರ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಶ್ಯಾನುಭೋಗ್ ಸ್ವಾಗತಿಸಿ, ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಆಡಳಿತ ಮಂಡಳಿ ಸಂಚಾಲಕರಾದ ಶ್ರೀ ರವಿ ನಾರಾಯಣ ಪ್ರಾಸ್ತಾವಿಕವಾಗಿ ಮಾತನಾಡಿ, ವಿವೇಕಾನಂದ ಬಿ. ಎಡ್. ಕಾಲೇಜಿನ ಪ್ರಾಂಶುಪಾಲೆ ಡಾ. ಶೋಭಿತಾ ಸತೀಶ್ ವಂದಿಸಿದರು.