74 ನೇ ಸ್ವಾತಂತ್ರ್ಯ ದಿನಾಚರಣೆ

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ 74ನೇ ಸ್ವಾತಂತ್ರ್ಯೋತ್ಸವದ ಕಾರ್ಯಕ್ರಮದಲ್ಲಿ ಧ್ವಜಾರೋಹಣವನ್ನು ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಶ್ರೀ ರಮೇಶ್ಚಂದ್ರ ಇವರು ನೆರವೇರಿಸಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ನರೇಂದ್ರ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷರಾದ ಶ್ರೀಮತಿ ರೂಪಲೇಖಾ ಪಾಣಾಜೆದೇಶದಲ್ಲಿ ಪ್ರಸ್ತುತತೆಯ ಸಂದರ್ಭದಲ್ಲಿ ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಅದರ ವಿರುದ್ಧ ನಾವು ಹೋರಾಡಬೇಕಾದ ಅನಿವಾರ್ಯತೆಯ ಅರಿವನ್ನು ಮೂಡಿಸಿದರು.

Independence Day 2020 (2)

Independence Day 2020 (3)

Independence Day 2020 (1)

ಕಾರ್ಯಕ್ರಮದಲ್ಲಿ ನರೇಂದ್ರ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಪದಾಧಿಕಾರಿಗಳು, ಸಿಬ್ಬಂದಿ ವರ್ಗ, ವಿದ್ಯಾರ್ಥಿ ವೃಂದ, ಹಾಗೂ ಶಾಲಾ ಆಡಳಿತ ಮಂಡಳಿಯ ಪದಾಧಿಕಾರಿಗಳು, ಶಾಲಾ ಮುಖ್ಯಗುರುಗಳು, ಶಿಕ್ಷಕ-ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.

ಶಾಲಾ ಮುಖ್ಯಗುರು ಶ್ರೀಮತಿ ಆಶಾ ಬೆಳ್ಳಾರೆ ಸ್ವಾಗತಿಸಿ, ನರೇಂದ್ರ ಪದವಿ ಪೂರ್ವಕಾಲೇಜಿನ ಪ್ರಾಂಶುಪಾಲರಾದ ಶ್ರೀ ಪ್ರಸಾದ್ ಶ್ಯಾನ್‌ಬೋಗ್‌ ಧನ್ಯವಾದ ಗೈದ ಕಾರ್ಯಕ್ರಮವನ್ನು ಶಿಕ್ಷಕಿ ಶ್ರೀಮತಿ ಸೌಮ್ಯಶ್ರೀ ನಿರೂಪಿಸಿದರು.

Highslide for Wordpress Plugin