ಗಣಿತ ಬೋಧನೆ ಪ್ರಯೋಗಾತ್ಮಕ ಹಾಗೂ ಚಟುವಟಿಕಾತ್ಮಕ ಆದಲ್ಲಿ ಕಲಿಕೆ ಪರಿಣಾಮಕಾರಿಯಾಗುತ್ತದೆ-ಶ್ರೀ ಸುಬ್ರಹ್ಮಣ್ಯ ಭಟ್ ಆಡಳಿತ ಮಂಡಳಿ ಸದಸ್ಯರು. ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ತೆಂಕಿಲ ಪುತ್ತೂರು.
ಆವರ್ತ-ಗಣಿತ ಸಂಘದ ವತಿಯಿಂದ ಏರ್ಪಡಿಸಲಾದ ಗಣಿತ-ಪ್ರಯೋಗಾತ್ಮಕ ಬೋಧನೆ ಎಂಬ ವಿಷಯದಲ್ಲಿ ಗಣಿತ ವಿಷಯ ಬೋಧಕ ಶಿಕ್ಷಕರಿಗೆ ಶಾಲಾ ಆಡಳಿತ ಮಂಡಳಿ ಸದಸ್ಯರಾದ ನಿವೃತ್ತ ಮುಖ್ಯೋಪಾಧ್ಯಾಯರೂ ಆದ ಶ್ರೀಯುತ ಸುಬ್ರಹ್ಮಣ್ಯ ಭಟ್ ಕೆದಿಲ ಇವರು ಗಣಿತ ಕಲಿಕೋಪಕರಣ ತಯಾರಿ ಬಗ್ಗೆ ಅವಧಿ ನಡೆಸಿಕೊಟ್ಟರು. ಶಾಲೆಯಲ್ಲಿ ಗಣಿತ ಪ್ರಯೋಗಾಲಯ ಮಾಡುವ ಯೋಜನೆಯಂತೆ ವಿಭಿನ್ನ ಚಟುವಟಿಕೆಗಳು ನಡೆಯುತ್ತಿದ್ದು ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಗಣಿತ ಕಲಿಕೋಪಕರಣ ತಯಾರಿಯಲ್ಲಿ ತೊಡಗಿರುತ್ತಾರೆ.