ಅನುರಣನ ಪ್ರತಿಭೋತ್ಸವ 2022-23
ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಕಲಿತಂತಹ ಮಕ್ಕಳು ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವಲ್ಲಿ ಮುಖ್ಯ ಪಾತ್ರ ವಹಿಸುತ್ತಾರೆ ಎಂದು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆದ ಅನುರಣನ ಪ್ರತಿಭೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿದ ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷರಾದ ಶ್ರೀ ಸತೀಶ್ ರಾವ್ ನುಡಿದರು.
ಶಾಲಾ ಪೋಷಕರಾದ ಶ್ರೀ ವಿಷ್ಣು ಭಟ್ ಪಾದೆ ಕಲ್ಲು ಮಾತನಾಡಿ ಗುರುಹಿರಿಯರ ಮಾರ್ಗದರ್ಶನದೊಂದಿಗೆ ಬದುಕುತ್ತಾ ಉತ್ತಮ ಕೆಲಸ ಕಾರ್ಯಗಳ ಸಫಲತೆಗೆ ಒಗ್ಗಟ್ಟಿನಲ್ಲಿ ಬಲವಿದ್ದರೆ ಮಾತ್ರ ಸಾಧ್ಯ ಎಂಬುದನ್ನು ಕಥೆಯ ಮೂಲಕ ಮಕ್ಕಳಿಗೆ ಮನದಟ್ಟು ಮಾಡಿದರು. ಶಾಲೆಯ ಹಿರಿಯ ವಿದ್ಯಾರ್ಥಿನಿ ಹಾಗೂ ಮಕ್ಕಳ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ಕುಮಾರಿ ಶ್ರೇಯಾ ಮಾತನಾಡುತ್ತಾ ಗರ್ಭಗುಡಿಯಲ್ಲಿ ಪೂಜೆಗೆ ಅರ್ಹವಾದ ದೇವರಿಗೆ ಶಿಲ್ಪಿ ಎಷ್ಟು ಮುಖ್ಯವೋ ಶಾಲೆಯಲ್ಲಿ ಕಲಿಯುವ ಮಕ್ಕಳು ಸುಂದರ ಮೂರ್ತಿಗಳಾಗಲು ಗುರುವೃಂದವು ಅಷ್ಟೇ ಮುಖ್ಯ ಪಾತ್ರವಹಿಸುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಶಾಲಾ ಹಿರಿಯ ವಿದ್ಯಾರ್ಥಿಗಳಾದ ಕುಮಾರಿ ಶ್ರೇಯ ಆದಿತ್ಯ ಯತಿನ್ ಹಾಗೂ ಹತ್ತನೇ ತರಗತಿಯ ಯಶಸ್ಸ ಇವರಿಂದ ಯಕ್ಷಗಾನಾರ್ಚನೆ ಎಂಬ ಪೌರಾಣಿಕ ಬಾಲ ಪಾತ್ರಗಳನ್ನೊಳಗೊಂಡ ವಿಶಿಷ್ಟ ಕಾರ್ಯಕ್ರಮವು ಸಂಪನ್ನಗೊಂಡಿತು. ಕಾರ್ಯಕ್ರಮದಲ್ಲಿ ವಿವಿಧ ಸಾಂಸ್ಕೃತಿಕ, ಕಲಿಕೆ, ಕ್ರೀಡೆಗಳಲ್ಲಿ ಭಾಗವಹಿಸಿ ವಿಜೇತರಾದ ಪ್ರತಿಭೆಗಳಿಗೆ ಬಹುಮಾನ ಹಾಗೂ ಪ್ರಶಸ್ತಿ ಪತ್ರಗಳನ್ನು ವಿತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರು, ಸಂಚಾಲಕರು, ಸರ್ವ ಸದಸ್ಯರು ಹಾಗೂ ಶಾಲಾ ಶಿಕ್ಷಕರು,ಮಕ್ಕಳು ಉಪಸ್ಥಿತರಿದ್ದರು.
‘ಅವಕಾಶ ಸಿಕ್ಕಾಗ ಅದನ್ನು ಬಳಸಿಕೊಂಡಾಗ ನಮ್ಮಲ್ಲಿರುವ ಸುಪ್ತ ಪ್ರತಿಭೆ ಅನಾವರಣ ಸಾಧ್ಯ ಅದಕ್ಕಾಗಿ ಇಂದು ಸ್ಪರ್ಧೆಗಳು ಸಹಕರಿಸುತ್ತವೆ’ * ಎಂದು ಶ್ರೀಯುತ ಸುಬ್ರಹ್ಮಣ್ಯ ಭಟ್ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆದ ಅನುರಣನ ಪ್ರತಿಭೋತ್ಸವ ಕಾರ್ಯಕ್ರಮದಲ್ಲಿ ಶುಭ ಹಾರೈಸಿದರು.
ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಆರಂಭಗೊಂಡ ಈ ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ ಪ್ರತಿಭೆಗಳನ್ನು ಪುರಸ್ಕರಿಸಲಾಯಿತು.
ವಿದ್ಯಾರ್ಥಿಗಳ ಸಮೂಹ ಗಾಯನವೂ ಈ ಸಮಯದಲ್ಲಿ ಕಾರ್ಯಕ್ರಮಕ್ಕೆ ವಿಶೇಷ ಮೆರುಗನ್ನು ನೀಡಿತು. ಶ್ರೀಯುತ ತಿರುಮಲೇಶ್ವರ ಭಟ್ಟ ಇವರು ಸಭಾಧ್ಯಕ್ಷೀಯ ನೆಲೆಯಲ್ಲಿ ಶುಭನುಡಿಗಳನ್ನಾಡಿದರು.. ವೇದಿಕೆಯಲ್ಲಿ ಶಾಲಾ ಶಿಕ್ಷಕ ರಕ್ಷಕ ಸಂಘದ ಸದಸ್ಯರಾದ ಶ್ರೀಮತಿ ಉಮಾ ಶಿವರಾಮ್ ಮತ್ತು ರೇವತಿ ಮಾತಾಜಿ ಹಾಗೂ ಹಿರಿಯ ವಿದ್ಯಾರ್ಥಿಯಾದ ಅಜಿತ್ ಇವರು ಉಪಸ್ಥಿತರಿದ್ದರು.
ಶ್ರೀಮತಿ ಶ್ರೀಲತಾ ಮಾತಾಜಿ ಇವರು ಸ್ವಾಗತಿಸಿ, ಶ್ರೀಮತಿ ಉಮಾ ಮಾತಾಜಿಯವರು ಕಾರ್ಯಕ್ರಮವನ್ನು ನಿರ್ವಹಿಸಿದರು.