ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು, ಸೈಂಟ್ ಜೋಕಿಮ್ ವಿದ್ಯಾಸಂಸ್ಥೆಗಳು, ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆ ಕಡಬ ಇದರ ಸಹಯೋಗದಲ್ಲಿ ನಡೆದ ಅವಿಭಜಿತ ಪುತ್ತೂರು ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ತೆಂಕಿಲ ಪುತ್ತೂರು ಇಲ್ಲಿನ ೧೦ನೇ ತರಗತಿಯ ವಿದ್ಯಾರ್ಥಿ ಕೃಷ್ಣ ಜಿ ಇವರು ಗುಂಡುಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ ಶಾಲಾ ಪರವಾಗಿ ಅಭಿನಂದನೆಗಳು.