ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉಪನಿರ್ದೇಶಕರ ಕಛೇರಿ,ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಸುಳ್ಯ ಮತ್ತು ಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯ ಇವರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ನಮ್ಮ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಶ್ರೀಶ ನಿಡ್ವಣ್ಣಾಯ (ಹೆಬ್ಬಾರಬೈಲು ನಿವಾಸಿ ಶ್ರೀ ರಾಮಗೋಪಾಲ ನೂಜಾಜೆ ಮತ್ತು ಪೂರ್ಣಿಮ ನೂಜಾಜೆ ದಂಪತಿಗಳ ಪುತ್ರ) ಪ್ರೌಢ ವಿಭಾಗದ ಸಂಸ್ಕೃತ ಧಾರ್ಮಿಕ ಪಠಣದಲ್ಲಿ ತೃತೀಯ ಬಹುಮಾನ ಗಳಿಸಿರುತ್ತಾರೆ. ಹಿರಿಯ ಪ್ರಾಥಮಿಕ ವಿಭಾಗದ ಆಶುಭಾಷಣ ಸ್ಪರ್ಧೆಯಲ್ಲಿ ಶಿವಾನಿ ಎಸ್ ರೈ 7ನೇ ತರಗತಿ (ಶಿಬರ ಪಂಜಳ ನಿವಾಸಿ ಸೋಮನಾಥ ರೈ ಮತ್ತು ವಸಂತಿ ದಂಪತಿಗಳ ಪುತ್ರಿ) ದ್ವಿತೀಯ ಬಹುಮಾನ ಪಡೆದಿರುತ್ತಾರೆ.