ದಿನಾಂಕ 26-01-2023ನೇ ಗುರುವಾರದಂದು ವಿವೇಕಾನಂದ ಆಂಗ್ಲ ಮತ್ತು ಕನ್ನಡ ಮಾಧ್ಯಮ ಶಾಲೆ, ವಿವೇಕಾನಂದ ಬಿ.ಇಡಿ ಕಾಲೇಜು, ನರೇಂದ್ರ ಪದವಿ ಪೂರ್ವ ಕಾಲೇಜು ವಿವೇಕನಗರ ತೆಂಕಿಲ ಇವುಗಳ ಜಂಟಿ ಆಶ್ರಯದಲ್ಲಿ 74ನೇ ಗಣರಾಜ್ಯೋತ್ಸವವನ್ನು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಕ್ರೀಡಾಂಗಣದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ನಮ್ಮ ದೇಶದ ನಿವೃತ್ತ ಸೈನ್ಯಾಧಿಕಾರಿ ಹಾಗೂ ಪೋಷಕರಾದ ಶ್ರೀ ಕಿಶೋರ್ ಮಾವಜಿ ಅವರು ಧ್ವಜಾರೋಹಣಗೈದರು. ನಂತರ ಮಾತನಾಡಿದ ಅವರು ಮೂಲಭೂತ ಹಕ್ಕುಗಳ ಜೊತೆಗೆ ಮೂಲಭೂತ ಕರ್ತವ್ಯಗಳನ್ನು ಸೂಕ್ತವಾಗಿ ನಿರ್ವಹಿಸುವ ಅಗತ್ಯವಿದೆ. ಮಾತ್ರವಲ್ಲದೆ ಸಂವಿಧಾನದ ಗೌರವ ರಕ್ಷಣೆ ಮತ್ತು ದೇಶ ರಕ್ಷಣೆ ನಮ್ಮೆಲ್ಲರ ಆದ್ಯತೆಯಾಗಬೇಕು ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಖಜಾಂಜಿ ಶ್ರೀ ಅಚ್ಯುತ್ ನಾಯಕ್ ಸಂದರ್ಭೋಚಿತವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ನಾಲ್ಕು ವಿದ್ಯಾಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರು, ಸಂಚಾಲಕರು, ಸದಸ್ಯರು, ಶಿಕ್ಷಕ ರಕ್ಷಕ ಸಂಘದ ಪದಾಧಿಕಾರಿಗಳು, ಶಿಕ್ಷಕ – ಶಿಕ್ಷಕೇತರ ಸಿಬ್ಬಂದಿಗಳು, ಬಿ.ಇಡಿ ವಿದ್ಯಾರ್ಥಿ ಶಿಕ್ಷಕರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ‘ವಂದೇ ಮಾತರಂ’ ಧ್ವಜಗೀತೆ ಮತ್ತು ರಾಷ್ಟ್ರಗೀತೆಯನ್ನು ವಿದ್ಯಾರ್ಥಿ-ವಿದ್ಯಾರ್ಥಿನಿಯರು ಹಾಡಿದರು. ಪ್ರೌಢಶಾಲಾ ವಿದ್ಯಾರ್ಥಿಗಳಿಂದ ಆಕರ್ಷಕ ಕವಾಯತು ನಡೆಸಲಾಯಿತು.ಅತ್ಯಂತ ಅಚ್ಚುಕಟ್ಟಾಗಿ ನಡೆದ ಕಾರ್ಯಕ್ರಮವನ್ನು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರು ನಿರ್ವಹಿಸಿದರು.
ವಿವೇಕಾನಂದ ಬಿ.ಇಡಿ ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಡಾ.ಶೋಭಿತಾ ಸತೀಶ್ ಸ್ವಾಗತಿಸಿ, ನರೇಂದ್ರ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶಾನುಭೋಗ್ ವಂದಿಸಿದರು.ಶ್ರೀಮತಿ ಕೃತಿಕಾ ರೈ ಕಾರ್ಯಕ್ರಮ ನಿರೂಪಿಸಿದರು.