ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ವಿವೇಕಾನಂದ ಕನ್ನಡ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆಯ ‘ಅನ್ನಪೂರ್ಣ’ ಯೋಜನೆಯ ನೂತನ ಪಾಕಶಾಲೆ ‘ಸಾನ್ನಿಧ್ಯ’ ಇದರ ಲೋಕಾರ್ಪಣೆ ಜು.5ರಂದು ನಡೆಯಿತು. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ವೇ.ಮೂ.ವಿ.ಎಸ್ ಭಟ್ ರವರ ನೇತೃತ್ವದಲ್ಲಿ ವಾಸ್ತು ಪೂಜೆ ನಡೆಯಿತಿ. ಬೆಂಗಳೂರು ಬಯೋಟೆಕ್ ಕಂಪೆನಿಯ ಅಧ್ಯಕ್ಷರು ಮತ್ತು ವ್ಯವಸ್ಥಾಪಕರಾಗಿರುವ ಡಾ. ಶಾಮ ಭಟ್ಟ, ವಿವೇಕಾನಂದ ವಿದ್ಯಾವರ್ಧಕ ಸಂಘದ ಕೋಶಾಧಿಕಾರಿ ಅಚ್ಚುತ ನಾಯಕ್ ಹೆಚ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಬೆಂಗಳೂರು ಬಯೋಟೆಕ್ ಕಂಪೆನಿಯ ಅಧ್ಯಕ್ಷರು ಮತ್ತು ವ್ಯವಸ್ಥಾಪಕರಾಗಿರುವ ಡಾ. ಶಾಮ ಭಟ್ಟ ಅವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ರಮೇಶ್ಚಂದ್ರ, ಕೋಶಾಧಿಕಾರಿ ಅಶೋಕ್ ಕುಂಬ್ಳೆ, ಶಾಲಾ ಅನ್ನಪೂರ್ಣ ಯೋಜನಾ ಸಮಿತಿ ಕಾರ್ಯದರ್ಶಿ ಶ್ರೀಹರಿ, ಪ್ರೌಢಶಾಲಾ ವಿಭಾಗದ ಮುಖ್ಯಗುರು ಆಶಾ ಬೆಳ್ಳಾರೆ, ಪ್ರಾಥಮಿಕ ಶಾಲಾ ವಿಭಾಗದ ಮುಖ್ಯಗುರು ನಳಿನಿ ವಾಗ್ಲೆ ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಾಲೆಯ ಆಡಳಿತ ಮಂಡಳಿ ಸಂಚಾಲಕ ವಸಂತ ಸುವರ್ಣ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಶಾಲಾ ಅನ್ನಪೂರ್ಣ ಯೋಜನಾ ಸಮಿತಿ ಅಧ್ಯಕ್ಷ ಸುಹಾಸ್ ಮಜಿ ವಂದಿಸಿ, ಮಾತಾಜಿ ಉಮಾ ಮೋಹನ್ ಕಾರ್ಯಕ್ರಮ ನಿರೂಪಿಸಿದರು.