ತಾಲೂಕು ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆ

‘ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳುತ್ತಾ ಪ್ರತಿಯೊಂದು ನಂಬಿಕೆ ಆಚರಣೆಗಳ ಹಿಂದಿರುವ ವೈಜ್ಞಾನಿಕ ಸತ್ಯವನ್ನು ತಿಳಿದುಕೊಳ್ಳಬೇಕು’ ವಿಜ್ಞಾನ ಸಂಶೋಧನೆಗಳ ಸಾಧನೆಗಳು ಮನುಕುಲದ ಒಳಿತಿಗಾಗಿ ಬಳಸಿಕೊಳ್ಳಬೇಕೇ ಹೊರತು ವಿನಾಶಕ್ಕಲ್ಲ ಎಂಬುವುದಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿಕ್ಷಣ ಸಂಯೋಜಕರಾದ ಹರಿಪ್ರಸಾದ್ ಎಂ ಇವರು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ವಿಜ್ಞಾನ ನಾಟಕ ಸ್ಪರ್ಧೆಯ ಉದ್ಘಾಟನಾ ಸಂದರ್ಭದಲ್ಲಿ ಮುಖ್ಯ ಅತಿಥಿ ನೆಲೆಯಲ್ಲಿ ಮಾತನಾಡಿದರು. ಸಭಾಧ್ಯಕ್ಷತೆಯನ್ನು ವಹಿಸಿದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಆಡಳಿತ ಮಂಡಳಿಯ ಸಂಚಾಲಕರಾದ ಶ್ರೀ ವಸಂತ ಸುವರ್ಣ ಇವರು ಸ್ಪರ್ಧಾಳುಗಳಿಗೆ ಶುಭ ಹಾರೈಸಿದರು. ವೇದಿಕೆಯಲ್ಲಿ ವಿಜ್ಞಾನ ನಾಟಕ ನೋಡಲ್ ಅಧಿಕಾರಿಗಳಾದ ಶ್ರೀಮತಿ ಅಮೃತ ಕಲಾ, ತೀರ್ಪುಗಾರರಾಗಿ ಆಗಮಿಸಿದ ಅರವಿಂದ ಕುಡ್ಲ ಮತ್ತು ಎ ಎನ್ ಕೊಳಂಬೆ ಹಾಗೂ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಮುಖ್ಯಗುರುಗಳಾದ ಶ್ರೀಮತಿ ಆಶಾ ಬೆಳ್ಳಾರೆ ಉಪಸ್ಥಿತರಿದ್ದರು. ಶ್ರೀಮತಿ ರೇಷ್ಮಾ ಮಾತಾಜಿ ಕಾರ್ಯಕ್ರಮ ನಿರೂಪಿಸಿದರು.
ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ವಿಜೇತರಾದ ತಂಡಗಳು:
ಇAದ್ರಪ್ರಸ್ಥ ವಿದ್ಯಾಲಯ ಉಪ್ಪಿನಂಗಡಿ – ಪ್ರಥಮ
ಸುದಾನ ವಸತಿಯುತ ಶಾಲೆ, ಪುತ್ತೂರು – ದ್ವಿತೀಯ
ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ, ತೆಂಕಿಲ, ಪುತ್ತೂರು – ತೃತೀಯ

Highslide for Wordpress Plugin