ಪುತ್ತೂರು ತಾಲೂಕು ಮಟ್ಟದಲ್ಲಿ ನಡೆದ ಮಹಿಳೆಯರ ಖೋ-ಖೋ ಪಂದ್ಯಾವಳಿಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಬಾಲಕಿಯರು ಪ್ರಥಮ ಸ್ಥಾನ ಮತ್ತು ಪುರುಷರ ಖೋ-ಖೋ ಪಂದ್ಯಾವಳಿಯಲ್ಲಿ ಬಾಲಕರ ತಂಡ ದ್ವಿತೀಯ ಸ್ಥಾನ ಪಡೆದು ಕೊಂಡಿದೆ. ಮತ್ತು ಮಹಿಳೆಯರ 4×100 ಮೀಟರ್ ರಿಲೇಯಲ್ಲಿ ಗುಣಶ್ರೀ (ಶ್ರೀನಿವಾಸ್ ಮತ್ತು ಹೇಮಾವತಿ ದಂಪತಿಗಳ ಪುತ್ರಿ), ಪ್ರತೀಕ್ಷಾ(ಬಾಲಕೃಷ್ಣ ಮತ್ತು ಶಶಿಕಲಾ ದಂಪತಿಗಳ ಪುತ್ರಿ), ತ್ರಿಶಾ (ಸತೀಶ್ ಮತ್ತು ಪುಷ್ಪಲತಾ ದಂಪತಿಗಳ ಪುತ್ರಿ), ಕೀರ್ತಿ (ಮೋನಪ್ಪ ಮತ್ತು ಲಲಿತಾ ದಂಪತಿಗಳ ಪುತ್ರಿ) ಇವರ ತಂಡ ದ್ವಿತೀಯ ಸ್ಥಾನ ಗಳಿಸಿದೆ. ಕೀರ್ತಿ ಎತ್ತರ ಜಿಗಿತದಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾಳೆ.