ವಿವೇಕಾನಂದ ವಿದ್ಯಾವರ್ಧಕ ಸಂಘದ ವಿವೇಕನಗರ ತೆಂಕಿಲ ಸಂಕೀರ್ಣದಲ್ಲಿರುವ ವಿದ್ಯಾಸಂಸ್ಥೆಗಳಾದ ವಿವೇಕಾನಂದ ಕನ್ನಡ ಮಾಧ್ಯಮ, ಆಂಗ್ಲಮಾಧ್ಯಮ, ನರೇಂದ್ರ ಪದವಿ ಪೂರ್ವ ಕಾಲೇಜು ಮತ್ತು ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ 75ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ವಿದ್ಯಾಸಂಸ್ಥೆಗಳ ಆವರಣದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು.
ಘೋಷ್ ವೃಂದದೊಂದಿಗೆ ವೇದಿಕೆಗೆ ಆಗಮಿಸಿದ ಅತಿಥಿಗಳು ಸಂವಿಧಾನ ಶಿಲ್ಪಿ ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಫ ನಮನ ಸಲ್ಲಿಸಿದರು ಭಾರತೀಯ ಸೇನಾಪಡೆಯ ಯೋಧ ಶ್ರೀ ಜಯ ನಾಯಕ್ ಧ್ವಜಾರೋಹಣಗೈದರು, ನಿವೃತ್ತ ಯೋಧ ಬಾಲಕೃಷ್ಣ ಪಟ್ಟೆ ಗಣರಾಜ್ಯೋತ್ಸವದ ಸಂದೇಶ ನೀಡಿದರು.ವೇದಿಕೆಯಲ್ಲಿ ನಾಲ್ಕು ಸಂಸ್ಥೆಗಳ ಮುಖ್ಯಸ್ಥರು, ಆಡಳಿತ ಮಂಡಳಿಯ ಅಧ್ಯಕ್ಷರು, ಸಂಚಾಲಕರು ಹಾಗೂ ಶಿಕ್ಷಕ-ರಕ್ಷಕ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.