ವಿವೇಕಾನಂದ ತೆಂಕಿಲದಲ್ಲಿ ಸೂರ್ಯ ನಮಸ್ಕಾರ

ವಿವೇಕಾನಂದ ಮಹೋತ್ಸವ ಸಮಿತಿ ಮತ್ತು ವಿವೇಕಾನಂದ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ಫೆ. ೧೮ ರಂದು ಬೆಳಿಗ್ಗೆ ತೆಂಕಿಲ ವಿವೇಕನಗರದಲ್ಲಿ ವಿವೇಕಾನಂದ ಕನ್ನಡ ಮತ್ತು ಆಂಗ್ಲಮಾಧ್ಯಮ ಶಾಲಾ ಕ್ರೀಡಾಂಗಣದಲ್ಲಿ ಸಾಮೂಹಿಕ ಸೂರ್ಯ ನಮಸ್ಕಾರ ಮಾಡಲಾಯಿತು. ಶಾಲಾ ವಿದ್ಯಾರ್ಥಿಗಳು, ಬಿ.ಎಡ್ ವಿದ್ಯಾರ್ಥಿಗಳು, ಶಿಕ್ಷಕರು ಸೂರ್ಯನಮಸ್ಕಾರ ಮಾಡಿದರು. ಪುಟಾಣಿಗಳು ಶಾಲಾ ಒಳಾಂಗಣದ ಸಭಾಂಗಣದಲ್ಲಿ ಸೂರ್ಯನಮಸ್ಕಾರ ಮಾಡಿದರು. ಯೋಗ ಶಿಕ್ಷಕಿ ಶ್ರೀಮತಿ ಶರಾವತಿ ಮತ್ತು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖ್ ಹಾಗೂ ವಿವೇಕಾನಂದ ಕನ್ನಡ ಮತ್ತು ಆಂಗ್ಲಮಾಧ್ಯಮ ಶಾಲಾ ಆಡಳಿತ ಮಂಡಳಿಯ ಸದಸ್ಯರೂ ಆದ ಶ್ರೀ ಅಚ್ಯುತ ನಾಯಕ್ ಅಭ್ಯಾಸವರ್ಗ ಮಾಡಿದರು.

Highslide for Wordpress Plugin