ಪುತ್ತೂರಿನ ತೆಂಕಿಲ ವಿದ್ಯಾಸಂಸ್ಥೆಗಳ ಸಹಯೋಗದಲ್ಲಿ ಧ್ವಜರೋಹಣ ಕಾರ್ಯಕ್ರಮದಲ್ಲಿ ನಿವೃತ್ತ ಯೋಧ ಉದಯಶಂಕರ ಮಾಣಿ ಮುಖ್ಯ ಅತಿಥಿಗಳಾಗಿದ್ದು ಧ್ವಜಾರೋಹಣ ಗೈದು ವಿದ್ಯಾರ್ಥಿಗಳಿಗೆ ಸ್ವಾತಂತ್ರೋತ್ಸವದ ಸಂದೇಶ ನೀಡಿದರು.
ವೇದಿಕೆಯಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಜೊತೆ ಕಾರ್ಯದರ್ಶಿ ರೂಪಲೇಖ, ಮತ್ತು ತೆಂಕಿಲ ವಿದ್ಯಾಸಂಸ್ಥೆಗಳ ಆಡಳಿತ ಮಂಡಳಿ ಪದಾಧಿಕಾರಿಗಳು, ಮುಖ್ಯಗುರುಗಳು ಉಪಸ್ಥಿತರಿದ್ದರು. ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ, ವಿವೇಕಾನಂದ ಆಂಗ್ಲಮಾಧ್ಯಮ ಶಾಲೆ, ನರೇಂದ್ರ ಪದವಿಪೂರ್ವ ಕಾಲೇಜು, ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದ ಶಿಕ್ಷಕರು, ಉಪನ್ಯಾಸಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಬಳಿಕ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಹಾಗೂ ಅವರ ಸುರಕ್ಷತೆಗೆ ಕ್ರಮ ಕೈಗೊಳ್ಳಲು ಆಗ್ರಹಿಸಿ, ಜನಜಾಗೃತಿಗಾಗಿ ವಿವೇಕಾನಂದ ತೆಂಕಿಲದ ವಿದ್ಯಾರ್ಥಿಗಳೆಲ್ಲ ಒಟ್ಟು ಸೇರಿ ಪುತ್ತೂರಿನ ಬೈಪಾಸ್ ರಸ್ತೆಯುದ್ದಕ್ಕೂ ಮಾನವ ಸರಪಳಿ ರಚಿಸಿದರು.