ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ ವಿದ್ಯಾಭಾರತಿ ದಕ್ಷಿಣ ಮಧ್ಯ ಕ್ಷೇತ್ರೀಯ ಇದರ ವತಿಯಿಂದ ಶಾರದಾ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ತಲಪಾಡಿ ಮಂಗಳೂರು ಇಲ್ಲಿ ನಡೆದ ಮಧ್ಯಕ್ಷೇತ್ರೀಯ ಮಟ್ಟದ ಗಣಿತ-ವಿಜ್ಞಾನ ಮೇಳ ಮತ್ತು ಸಂಸ್ಕೃತಿ ಮಹೋತ್ಸವ ಸ್ಪರ್ಧೆಯ ಕ್ಲೇ ಮಾಡೆಲಿಂಗ್ ನಲ್ಲಿ ಶಾಲೆಯ ನಿಖಿಲ್ (ಕೋಡಿಂಬಾಡಿ ನಿವಾಸಿ ಕೃಷ್ಣಪ್ಪ ಮತ್ತು ಧನವತಿ ದಂಪತಿಗಳ ಪುತ್ರ) ಪ್ರಥಮ ಸ್ಥಾನ ಪಡೆದು ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ನಡೆಯುವ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾನೆ. ಇವನಿಗೆ ಶಾಲಾ ಚಿತ್ರಕಲಾ ಶಿಕ್ಷಕರಾದ ರುಕ್ಮಯ ಇವರು ತರಬೇತಿ ಮಾರ್ಗದರ್ಶನ ನೀಡಿದ್ದರು