ಕನ್ನಡ ರಾಜ್ಯೋತ್ಸವ ಆಚರಣೆ


ನಮ್ಮ ಮಾತೃ ಭಾಷೆಯಾದ ಕನ್ನಡ ನಮ್ಮ ಹೃದಯದ ಭಾಷೆಯಾಗಿದೆ. ಭಾವನೆಗಳನ್ನು ಪರಿಣಾಮಕಾರಿಯಾಗಿ ವ್ಯಕ್ತಪಡಿಸಲು ಕೇವಲ ಮಾತೃ ಭಾಷೆಯಿಂದ ಮಾತ್ರ ಸಾಧ್ಯ . ಆದ್ದರಿಂದ ಭಾಷೆಯ ಸೊಗಡು ಬೇರೆ ಬೇರೆ ಇದ್ದರೂ ಅದನ್ನು ಸವಿಯುವ ಮನೋಭಾವ ನಮ್ಮದಾಗಬೇಕು ಎಂದು ಶಾಲೆಯಲ್ಲಿ ನಡೆದ ಕನ್ನಡ ರಾಜ್ಯೋತ್ಸವದ ಆಚರಣೆಯ ಸಂದರ್ಭದಲ್ಲಿ ಶಾಲಾ ಹಿರಿಯ ಶಿಕ್ಷಕಿ ಶ್ರೀಮತಿ ರೇವತಿ ನುಡಿದರು. ಕನ್ನಡ ಭಾಷೆಯ ಹಿರಿಮೆ – ಗರಿಮೆ ಹಾಗೂ ಕನ್ನಡ ಭಾಷೆಯಲ್ಲಿ ಲಭ್ಯವಿರುವ ಸಾಹಿತ್ಯವನ್ನು ಹೆಚ್ಚು ಹೆಚ್ಚಾಗಿ ಓದುವಂತೆ ತಿಳಿಸಿದರು.

                                             

ಮುಖ್ಯ ಅತಿಥಿಗಳಾಗಿ ಆಗಮಿಸಿದ ನಮ್ಮ ಶಾಲಾ ಪೋಷಕರಾದ ಶ್ರೀಯುತ ಗಣೇಶ್‍ರವರು ಪ್ರತಿಯೊಬ್ಬರು ಕನ್ನಡ ಭಾಷೆಯನ್ನು ಉಳಿಸುವ ನೆಲೆಯಲ್ಲಿ ಕನ್ನಡ ಪರವಾದ ಸಣ್ಣಪುಟ್ಟ ಕಾರ್ಯಚಟುವಟಿಕೆಗಳನ್ನು ಬಳಸಿಕೊಳ್ಳೋಣ ಎಂದು ವಿದ್ಯಾರ್ಥಿಗಳಿಗೆ ಕರೆಯಿತ್ತರು.
ಶಾಲಾ ಮುಖ್ಯಗುರುಗಳಾದ ಶ್ರೀಮತಿ ಆಶಾ ಬೆಳ್ಳಾರೆಯವರು ಮಾತನಾಡುತ್ತಾ ಕನ್ನಡ ರಾಜ್ಯೋತ್ಸವದ ಪ್ರಾಮುಖ್ಯತೆಯನ್ನು ಅರಿತು ಆಚರಿಸಿ ಆ ಮೂಲಕ ಅದನ್ನು ಮುಂದಿನ ಪೀಳಿಗೆಗೆ ರವಾನಿಸುವ ಮಹತ್ವದ ಜವಬ್ದಾರಿ ನಮ್ಮ ಮೇಲಿದೆ ಎಂದರು.

Highslide for Wordpress Plugin