ದಕ್ಷಿಣ ಕನ್ನಡ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕ್ಷೇತ್ರ ಸಂಪನ್ಮೂಲ ಕಛೇರಿ ಪುತ್ತೂರು ಮತ್ತು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ, ಪುತ್ತೂರು ಇದರ ಸಹಭಾಗಿತ್ವದಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾಕಾರಂಜಿಯಲ್ಲಿ ಶಾಲೆಯ ಶ್ರೀಕೃಷ್ಣ ಬಿ( ಶ್ರೀ ವೆಂಕಟೇಶ.ಬಿ ಮತ್ತು ಶ್ರೀಮತಿ ಮಂಗಳ ಗೌರಿ ದಂಪತಿಗಳ ಪುತ್ರ) -ಹಿರಿಯ ಪ್ರಾಥಮಿಕ ವಿಭಾಗದ ಆಶುಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ. ಕಿರಿಯ ಪ್ರಾಥಮಿಕ ವಿಭಾಗದ ಭಕ್ತಿಗೀತೆ ಸ್ಪರ್ಧೆಯಲ್ಲಿ ಕು. ಮಾತಂಗಿ(ವಿದ್ವಾನ್ ದೀಪಕ್ ಕುಮಾರ್ ಮತ್ತು ವಿದುಷಿ ಪ್ರೀತಿಕಲಾ ದಂಪತಿಗಳ ಪುತ್ರಿ) ಪ್ರಥಮ ಸ್ಥಾನ ಪಡೆದಿರುತ್ತಾಳೆ.