2012-13ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ನಮ್ಮ ಶಾಲೆಯಲ್ಲಿ ಪರೀಕ್ಷೆಗೆ ಹಾಜರಾದ 98 ವಿದ್ಯಾರ್ಥಿಗಳಲ್ಲಿ 91 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇಕಡಾ 93 ಫಲಿತಾಂಶ ಬಂದಿರುತ್ತದೆ. ಇದರಲ್ಲಿ 12 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, 51 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 16 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ, ಮತ್ತು 12 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.
ಜಯಶ್ರೀ.ಪಿ – 593 ಅಂಕಗಳೊಂದಿಗೆ ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದು ಪುತ್ತೂರು ತಾಲೂಕಿಗೆ ದ್ವಿತೀಯ ಸ್ಥಾನಿಯಾಗಿರುತ್ತಾಳೆ. ಶ್ರೀವಿದ್ಯಾ ಕೆ.ಎಂ – 591 ಅಂಕಗಳೊಂದಿಗೆ ದ್ವಿತೀಯ ಸ್ಥಾನಿಯಾಗಿದ್ದು ಪುತ್ತೂರು ತಾಲೂಕಿಗೆ ತೃತೀಯ ಸ್ಥಾನಿಯಾಗಿರುತ್ತಾಳೆ. ಈಶ್ವರ್ ಸಂದೇಶ್.ಸಿ.ಎಂ – 583 ಅಂಕಗಳೊಂದಿಗೆ ತೃತೀಯ ಸ್ಥಾನ ಪಡೆದಿರುತ್ತಾನೆ.
ಉಳಿದಂತೆ ವಂದನಾ ಸಾಮಂತ್-581, ಮನೀಷ್ ಎಂ.ಎಸ್-580, ಶೀತಲ್.ಎಸ್-574, ಆಲ್ವಿನ್ ಸಿಕ್ವೇರಾ.ಬಿ-570, ಸುಮಾ. ಸಿ-567, ವಿಧಾತ.ಆರ್.ಭಟ್-563, ದೀಪಕ್.ಟಿ.ಎನ್-562, ಮಧುರಾ ವೈ-545, ಅನನ್ಯಲಕ್ಷೀ-540 ಅಂಕ ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.