ಪುತ್ತೂರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ಒಕ್ಕಲಿಗ ಗೌಡ ಸೇವಾ ಸಂಘ (ರಿ) ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡ ಜಯಂತಿ ಆಚರಣೆ ಜರುಗಿತು. ಆ ಪ್ರಯುಕ್ತ ನಡೆದ ಶಾಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ 10ನೇ ತರಗತಿಯ ವಿದ್ಯಾರ್ಥಿಗಳಾದ ತನ್ವಿತ ಎಂ, ಲಹರಿ ಯು, ಸ್ವೀಕೃತಿ ಬಿ ಇವರು ಪ್ರಮಾಣ ಪತ್ರ ಹಾಗೂ ಪುಸ್ತಕ ರೂಪದ ಬಹುಮಾನ ಪಡೆದುಕೊಂಡರು.