ಶಾಲೆಯಲ್ಲಿ ಒಂದು ವರ್ಷದ ಯೋಗ ಸಪ್ತಾಹ ಕಾರ್ಯಕ್ರಮವನ್ನು ಶಾಲಾ ಸಂಚಾಲಕರಾದ ಶ್ರೀ ವಸಂತ ಸುವರ್ಣ ಇವರು ವಿಶ್ವ ಯೋಗ ದಿನಾಚರಣೆಯ ದಿನದಂದು ದೀಪಪ್ರಜ್ವಲನೆಯ ಮೂಲಕ ಉದ್ಘಾಟಿಸಿ ಮಕ್ಕಳಿಗೆ ಯೋಗದ ಮಹತ್ವವನ್ನು ತಿಳಿಸಿದರು. ಉದ್ಘಾಟನಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ಸಾಮೂಹಿಕ ಸೂರ್ಯ ನಮಸ್ಕಾರ ಹಾಗೂ ಶಿವನಮಸ್ಕಾರದ ಪ್ರಾತ್ಯಕ್ಷಿಕೆ ನಡೆಯಿತು. ಪ್ರಾಥಮಿಕ ವಿಭಾಗದ ಮುಖ್ಯಗುರು ನಳಿನಿ ವಾಗ್ಲೆ ಉಪಸ್ಥಿತರಿದ್ದರು. ಶಿಕ್ಷಕಿ ನಮಿತಾ ಕೆ.ಕೆ ಸ್ವಾಗತಿಸಿ, ಶ್ರೀಮತಿ ಅನುರಾಧ ಕಾರ್ಯಕ್ರಮ ನಿರೂಪಿಸಿದರು.