ವಲಯಮಟ್ಟದ ಕಬಡ್ಡಿ ಪಂದ್ಯಾಟ – ತಾಲೂಕು ಮಟ್ಟಕ್ಕೆ ಆಯ್ಕೆ

               

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಇವರ ಆಶ್ರಯದಲ್ಲಿ ಮೊರಾಜಿ ದೇಸಾಯಿ ವಸತಿ ಶಾಲೆ ಬಲ್ನಾಡು ಮತ್ತು ಅಂಬೇಡ್ಕರ್ ವಸತಿ ಶಾಲೆ ಉಪ್ಪಿನಂಗಡಿ ಇದರ ಆಶ್ರಯದಲ್ಲಿ ನಡೆದ 14ರ ವಯೋಮಾನದ ಬಾಲಕ-ಬಾಲಕಿಯರ ವಲಯಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ ಮತ್ತು ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದು ತಾಲೂಕುಮಟ್ಟಕ್ಕೆ ಆಯ್ಕೆಯಾಗಿದೆ. ಇವರಿಗೆ ಶಾಲಾ ದೈಹಿಕ ಶಿಕ್ಷಕರುಗಳಾದ ದಾಮೋದರ್, ಹರಿಣಾಕ್ಷಿ, ಅಶ್ವಿತಾ ತರಬೇತಿ ನೀಡಿದ್ದರು

Highslide for Wordpress Plugin