
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ಕರ್ನಾಟಕ ಕ್ರೀಡಾ ಪ್ರಾಧಿಕಾರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ಜಿಲ್ಲೆ, ಇವರ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಜಿಲ್ಲಾ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಕು. ಜಿ.ಎಂ ಕೀರ್ತಿ ತ್ರಿವಿಧ ಜಿಗಿತದಲ್ಲಿ – ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಉಳಿದಂತೆ ಈಕೆ ಎತ್ತರ ಜಿಗಿತದಲ್ಲಿ – ತೃತೀಯ, 100ಮೀ ಹರ್ಡಲ್ಸ್ – ತೃತೀಯ ಸ್ಥಾನ ಪಡೆದಿದ್ದಾಳೆ. ಭಾಗವಹಿಸಿದವರಲ್ಲಿ ಈಕೆ ಅತ್ಯಂತ ಕಿರಿಯಳಾಗಿದ್ದು ಅವಳ ಈ ಸಾಧನೆಗೆ ಕ್ರೀಡಾಕೂಟದ ಆಯೋಜಕರು, ಶಾಲಾ ಆಡಳಿತ ಮಂಡಳಿ, ಶಾಲಾ ಮುಖ್ಯಗುರುಗಳು ಹಾಗೂ ಶಿಕ್ಷಕ ವೃಂದ ಅಭಿನಂದನೆ ಸಲ್ಲಿಸಿದ್ದಾರೆ. ಇವಳಿಗೆ ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯದ ದೈಹಿಕ ನಿರ್ದೇಶಕರಾದ ಶ್ರೀ ಬಾಲಚಂದ್ರ, ಶಾಲಾ ದೈಹಿಕ ಶಿಕ್ಷಕರಾದ ದಾಮೋದರ್, ಹರಿಣಾಕ್ಷಿ ಮತ್ತು ಕು. ಅಶ್ವಿತಾ ತರಬೇತಿ ನೀಡಿದ್ದರು.