ದಿನಾಂಕ 20-07-2013ರಂದು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ, ತೆಂಕಿಲ ಇಲ್ಲಿ ನಡೆಯುವ ಸಾಂಸ್ಕೃತಿಕ ಚಟುವಟಿಕೆಗಳ ಅಂಗವಾಗಿ ಹಿರಿಯ ಶಿಶು ಸಾಹಿತಿ ಶ್ರೀ ಬೆಂಡರವಾಡಿ ಸುಬ್ರಹ್ಮಣ್ಯ ಭಟ್‌ರವರು ಪುಟಾಣಿ ಮಕ್ಕಳಿಗೆ ಕಥೆ, ಹಾಡುಗಳನ್ನು ಹೇಳುವುದರ ಮೂಲಕ ಕುಣಿದು ಕುಪ್ಪಳಿಸುವಂತೆ ಮಾಡಿದರು. ಈ ಸಂದರ್ಭದಲ್ಲಿ ಶಾಲಾ ಹಿರಿಯ ಶಿಕ್ಷಕಿ ಶ್ರೀಮತಿ ದುರ್ಗಾದೇವಿಯವರು ಉಪಸ್ಥಿತರಿದ್ದರು.