‘ಅನುಭವ ಜನ್ಯ ಕಲಿಕೆಗೆ ಹೆಚ್ಚು ಮಹತ್ವ ಕೊಡಬೇಕು ‘ – ಸನ್ಮಾನ್ಯ ಶ್ರೀ ಅಶೋಕ್ ಕುಮಾರ್ ರೈ.ಮಾನ್ಯ ಶಾಸಕರು, ಪುತ್ತೂರು ವಿಧಾನಸಭಾ ಕ್ಷೇತ್ರ. […]
ವಿದ್ಯಾಭಾರತಿ ಅಖಿಲ ಭಾರತೀಯ ಸಂಸ್ಕೃತಿ ಮಹೋತ್ಸವ ಇದರ ವತಿಯಿಂದ ಸರಸ್ವತಿ ವಿದ್ಯಾ ಮಂದಿರ, ಸಂಸ್ಕೃತಿ ಭವನ, ಋಷಿ ನಗರ, ಉಜ್ಜೈನಿ (ಮಧ್ಯಪ್ರದೇಶ) ಇಲ್ಲಿ ನಡೆದ ರಾಷ್ಟ್ರಮಟ್ಟದ ಗಣಿತ-ವಿಜ್ಞಾನ ಮೇಳ ಮತ್ತು ಸಂಸ್ಕೃತಿ ಮಹೋತ್ಸವ ಸ್ಪರ್ಧೆಯ ಕ್ಲೇ ಮಾಡೆಲಿಂಗ್ ನಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ನಿಖಿಲ್ (ಕೋಡಿಂಬಾಡಿ ನಿವಾಸಿ ಕೃಷ್ಣಪ್ಪ ಮತ್ತು ಧನವತಿ ದಂಪತಿಗಳ ಪುತ್ರ) ದ್ವಿತೀಯ ಸ್ಥಾನ ಪಡೆದಿದ್ದಾನೆ. ಇವನಿಗೆ ಶಾಲಾ ಚಿತ್ರಕಲಾ ಶಿಕ್ಷಕರಾದ ರುಕ್ಮಯ ಇವರು ತರಬೇತಿ ಮಾರ್ಗದರ್ಶನ ನೀಡಿದ್ದರು
ತಂಬಾಕಿನಿಂದ ತಯಾರಿಸುವ ವಿವಿಧ ವಸ್ತುಗಳ ಸೇವನೆಯಿಂದ ದೈಹಿಕ, ಮಾನಸಿಕ ಹಾಗೂ ಕೌಟುಂಬಿಕ ಜೀವನದ ಮೇಲೆ ಉಂಟಾಗುವ ದುಷ್ಫರಿಣಾಮಗಳ ಬಗ್ಗೆ ಜೊತೆಗೆ ಮನೆ ಹಾಗೂ ಸುತ್ತಲಿನ ಸಮಾಜದಲ್ಲಿ ಜಾಗೃತಿ ಮೂಡಿಸುವಂತೆ ಉದಾಹರಣೆಗಳ ಮೂಲಕ ವಿವರಿಸುತ್ತಾ ಶಾಲಾ ವಿದ್ಯಾರ್ಥಿಗಳಿಗೆ ‘ತಂಬಾಕು ವ್ಯಸನ ಮುಕ್ತ ಸಮಾಜ ನಿರ್ಮಾಣ” ಮಾಡುವ ಪ್ರಮಾಣ ವಚನವನ್ನು ಶಾಲಾ ಹಿರಿಯ ಶಿಕ್ಷಕಿ ಪೂರ್ಣಿಮಾ ಮಾತಾಜಿ ಬೋಧಿಸಿದರು.
ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ (ನೋಂ) ಇವರು ನೀಡುವ ಉತ್ತಮ ಕನ್ನಡ ಶಾಲೆ– 2024ರ ಸನ್ಮಾನಕ್ಕೆ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ಪಾತ್ರವಾಗಿದೆ. ಶ್ರೀರಾಮ ಶಾಲೆ ಕಲ್ಲಡ್ಕ ಇಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ.ಪ್ರಭಾಕರ ಭಟ್ ಕಲ್ಲಡ್ಕ ಸನ್ಮಾನಿಸಿದರು.
ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ, ಪುತ್ತೂರು, ಇದರ ವತಿಯಿಂದ ಸಂತ ಫಿಲೋಮಿನಾ ಪ್ರೌಢಶಾಲೆಯಲ್ಲಿ ನಡೆದ ವೃತ್ತ ಮಟ್ಟದ ಪ್ರತಿಭಾರಂಜಿಯಲ್ಲಿ ಶಾಲೆಯ ಪೂಜಾ – ಚಿತ್ರಕಲೆ (ಪ್ರಥಮ), ಪ್ರಜ್ಞಾ ನಿಡ್ವಣ್ಣಾಯ – ಸಂಸ್ಕೃತ ಭಾಷಣ(ಪ್ರಥಮ), ಶ್ರೀರಕ್ಷಾ ಎ – ಕವನ ವಾಚನ (ಪ್ರಥಮ), ಕುಶಿತಾ ಬಿ -ಗಝಲ್(ದ್ವಿತೀಯ), ಧನುಷ್ ಡಿ.ಜಿ-ಚರ್ಚಾ ಸ್ಪರ್ಧೆ (ತೃತೀಯ), ಲಾಸ್ಯ ಎನ್.ವಿ-ಭರತನಾಟ್ಯ (ತೃತೀಯ), ಕವ್ವಾಲಿ – ಸಾಯೀಶ್ವರಿ, ಶಾರ್ವರಿ, ಶ್ರೇಯಸ್ ರಾವ್, ಕರಣ್ ಗೌಡ, ಶಿವಪ್ರಕಾಶ್, […]
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ (ರಿ)ಇದರ ವತಿಯಿಂದ ನಡೆದ ತಾಲೂಕು ಮಟ್ಟದ ಸ್ಪರ್ಧೆಯಲ್ಲಿ ಶಾಲೆಯ ಲಿಖಿತಾ ‘ಜ್ಞಾನ ದರ್ಶಿನಿ’ ಪುಸ್ತಕಾಧಾರಿತ ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಮತ್ತು ಪ್ರಜ್ಞಾ ನಿಡ್ವಣ್ಣಾಯ ‘ಜ್ಞಾನ ವರ್ಷಿಣಿ’ ಪುಸ್ತಕಾಧಾರಿತ ಶ್ಲೋಕ ಕಂಠಪಾಠ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.
ಶಾಲಾ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಇದರ ವತಿಯಿಂದ ವಿಕ್ಟರ್ಸ್ ಪ್ರೌಢಶಾಲೆ ಪುತ್ತೂರು ಇಲ್ಲಿ ನಡೆದ ತಾಲೂಕು ಮಟ್ಟದ ಶಿಕ್ಷಕರ ಸಹಪಠ್ಯ ಚಟುವಟಿಕಾ ಸ್ಪರ್ಧೆಯಲ್ಲಿ ಶಾಲೆಯ ಶಿಕ್ಷಕರಾದ ಸುಂದರ್ – ಪ್ರೌಢಶಾಲಾ ವಿಭಾಗದ ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು […]
ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಡೆದ ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ಕು. ಜಿ.ಎಂ.ಕೀರ್ತಿ 17ರ ವಯೋಮಾನದ ಬಾಲಕಿಯರ ವಿಭಾಗದ ಎತ್ತರ ಜಿಗಿತದಲ್ಲಿ ಮತ್ತು ತ್ರಿವಿಧ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ ಶಾಲಾ ದೈಹಿಕ ಶಿಕ್ಷಕರುಗಳು ತರಬೇತಿ ನೀಡಿರುತ್ತಾರೆ.
ನಮ್ಮ ಮಾತೃ ಭಾಷೆಯಾದ ಕನ್ನಡ ನಮ್ಮ ಹೃದಯದ ಭಾಷೆಯಾಗಿದೆ. ಭಾವನೆಗಳನ್ನು ಪರಿಣಾಮಕಾರಿಯಾಗಿ ವ್ಯಕ್ತಪಡಿಸಲು ಕೇವಲ ಮಾತೃ ಭಾಷೆಯಿಂದ ಮಾತ್ರ ಸಾಧ್ಯ . ಆದ್ದರಿಂದ ಭಾಷೆಯ ಸೊಗಡು ಬೇರೆ ಬೇರೆ ಇದ್ದರೂ ಅದನ್ನು ಸವಿಯುವ ಮನೋಭಾವ ನಮ್ಮದಾಗಬೇಕು ಎಂದು ಶಾಲೆಯಲ್ಲಿ ನಡೆದ ಕನ್ನಡ ರಾಜ್ಯೋತ್ಸವದ ಆಚರಣೆಯ ಸಂದರ್ಭದಲ್ಲಿ ಶಾಲಾ ಹಿರಿಯ ಶಿಕ್ಷಕಿ ಶ್ರೀಮತಿ ರೇವತಿ ನುಡಿದರು. ಕನ್ನಡ ಭಾಷೆಯ ಹಿರಿಮೆ – ಗರಿಮೆ ಹಾಗೂ ಕನ್ನಡ ಭಾಷೆಯಲ್ಲಿ ಲಭ್ಯವಿರುವ ಸಾಹಿತ್ಯವನ್ನು ಹೆಚ್ಚು ಹೆಚ್ಚಾಗಿ ಓದುವಂತೆ ತಿಳಿಸಿದರು. ಮುಖ್ಯ […]