
ಚಿತ್ರಕಲಾ ಸ್ಪರ್ಧೆ ಜಿಲ್ಲಾಮಟ್ಟಕ್ಕೆ ಆಯ್ಕೆ
Monday, November 6th, 2023ಉದಯವಾಣಿ ಮಕ್ಕಳ ಚಿತ್ರಕಲಾ ಸ್ಪರ್ಧೆ ಪುತ್ತೂರು ತಾಲೂಕು ಮಟ್ಟದ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಅದ್ವಿತ್ ಜಿ (ಗಣೇಶ್ ಆಚಾರ್ಯ ಮತ್ತು ಮಂಜುಳಾ ದಂಪತಿ ಪುತ್ರ) ಪ್ರಾಥಮಿಕ ವಿಭಾಗದಲ್ಲಿ ಪ್ರಥಮ, ಪೂಜಾ (ಸುರೇಶ್ ಮತ್ತು ವನಿತಾ ದಂಪತಿಗಳ ಪುತ್ರಿ) ಪ್ರೌಢಶಾಲಾ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರಿಗೆ ಶಾಲಾ ಚಿತ್ರಕಲಾ ಶಿಕ್ಷಕರಾದ ರುಕ್ಮಯ ಪೂಜಾರಿ ತರಬೇತಿ ನೀಡಿರುತ್ತಾರೆ.