ಪುರಸಭೆಯ ವತಿಯಿಂದ ಪುತ್ತೂರಿನ ಗುರುಭವನದಲ್ಲಿ ನಡೆದ ‘ಘನತ್ಯಾಜ್ಯ ವಿಲೇವಾರಿಯಲ್ಲಿ ವಿದ್ಯಾರ್ಥಿಯ ಪಾತ್ರ’ ಎಂಬ ವಿಷಯದ ಪ್ರಬಂಧ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಕು. ಶೀತಲ್ ಪ್ರಥಮ ಸ್ಥಾನ ಪಡೆದು 3000 ರೂ ನಗದು ಬಹುಮಾನ ಪಡೆದುಕೊಂಡಿದ್ದಾರೆ.
ಉಪ್ಪಿನಂಗಡಿಯಲ್ಲಿ ನಡೆದ ೨೦ನೇ ವಾರ್ಷಿಕ ದ.ಕ ಜಿಲ್ಲಾ ಮಟ್ಟದ ಮಕ್ಕಳ ರಾಷ್ಟ್ರೀಯ ವಿಜ್ಞಾನ ಸಮಾವೇಶದಲ್ಲಿ ‘ಜೈವಿಕ ಅನಿಲ ಬಳಸಿ, ದ್ರವಿಕೃತ ಅನಿಲ ಉಳಿಸಿ’ ಕಾರ್ಯಯೋಜನೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಹರ್ಷಿತಾ.ಕೆ.ಸಿ ಮತ್ತು ತಂಡ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಉಪ್ಪಿನಂಗಡಿಯಲ್ಲಿ ನಡೆದ ೨೦ನೇ ವಾರ್ಷಿಕ ದ.ಕ ಜಿಲ್ಲಾ ಮಟ್ಟದ ಮಕ್ಕಳ ರಾಷ್ಟ್ರೀಯ ವಿಜ್ಞಾನ ಮಾದರಿ ತಯಾರಿಕಾ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವರ್ಷಿತ್, ಮಂಜುನಾಥ ಮತ್ತು ಪ್ರಣವ ಬೆಳ್ಳಾರೆ, ಅಜಯ್ ಇವರುಗಳ ತಂಡ ದ್ವಿತೀಯ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಎಸ್.ಡಿ.ಎಂ ಮಂಗಳ ಜ್ಯೋತಿ ಶಾಲೆ ವಾಮಂಜೂರು ಇಲ್ಲಿ ನಡೆದ ಮೈಸೂರು ವಿಭಾಗೀಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಪ್ರೌಢಶಾಲಾ ವಿಭಾಗದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ೧೦ನೇ ತರಗತಿ ವಿದ್ಯಾರ್ಥಿ ಡಿ.ಜಿ.ರಾಘವೇಂದ್ರ ಗೌಡ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರಿಗೆ ಶಾಲಾ ದೈಹಿಕ ಶಿಕ್ಷಕಿ ಶ್ರೀಮತಿ ಹರಿಣಾಕ್ಷಿ ತರಬೇತಿ ನೀಡಿರುತ್ತಾರೆ.
ಪುತ್ತೂರು ಪುರಭವನದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಸಾರ್ವಜನಿಕ ಶಿಕ್ಷಣ ಇಲಾಖೆ ಇದರ ವತಿಯಿಂದ ಕೊಪ್ಪಳದಲ್ಲಿ ನಡೆದ ರಾಜ್ಯಮಟ್ಟದ ಬಾಲಕರ ೧೪ರ ವಯೋಮಾನದ ಒಳಗಿನ ತ್ರೋಬಾಲ್ ಪಂದ್ಯಾಟದಲ್ಲಿ ಪ್ರತಿನಿಧಿಸಿದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ. ಇವರಲ್ಲಿ ಪ್ರಜ್ವಲ್, ರಂಜೀತ್, ಸುಜೀತ್ ಇವರು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಸಾರ್ವಜನಿಕ ಶಿಕ್ಷಣ ಇಲಾಖೆ ಇದರ ವತಿಯಿಂದ ಕೊಪ್ಪಳದಲ್ಲಿ ನಡೆದ ರಾಜ್ಯಮಟ್ಟದ ಬಾಲಕರ ೧೪ ವಯೋಮಾನದ ಒಳಗಿನ ತ್ರೋಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಪ್ರಜ್ವಲ್ , ರಂಜಿತ್, ಸುಜೀತ್ ಇವರು ದೆಹಲಿಯಲ್ಲಿ ನಡೆಯುವ ರಾಷ್ಟ್ರಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಭಾಗವಹಿಸಲು ಆಯ್ಕೆ ಯಾಗಿದ್ದಾರೆ.
ದಿನಾಂಕ 25-10-2012ರಂದು ವಿವೇಕಾನಂದ ವಿದ್ಯಾ ಸಂಸ್ಧೆಯ ಶಿಕ್ಷಕರಿಗಾಗಿ ಮೂರು ದಿನಗಳ ಶೈಕ್ಷಣಿಕ ಕಾರ್ಯಾಗಾರವು ಉದ್ಘಾಟನೆಗೊಂಡಿತು. ಈ ಕಾರ್ಯಾಗಾರವನ್ನು ದೀಪ ಬೆಳಗಿಸುವುದರ ಮೂಲಕ ತಾಲೂಕು ಪಂಚಾಯಿತಿನ ಅಧ್ಯಕ್ಷರಾದ ಶ್ರೀಮತಿ ಶಶಿಪ್ರಭಾ ಸಂಪ್ಯರವರು ಉದ್ಘಾಟಿಸಿದರು. ವೇದಿಕೆಯಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿಗಳಾದ ಶ್ರೀ ಶಿವಪ್ರಸಾದ ಇ. ಹಾಗೂ ವಿವೇಕಾನಂದ ಆಂಗ್ಲ ಮತ್ತು ಕನ್ನಡ ಮಾದ್ಯಮಾ ಶಾಲೆಯ ಮುಖ್ಯಗುರುಗಳಾದ ಶ್ರೀ ಸತೀಶ್ ರೈ, ಶ್ರೀಮತಿ ಅಶಾಬೆಳ್ಳಾರೆ ಉಪಸ್ಧಿತರಿದ್ದರು. ನಂತರದ ಅವಧಿಯಲ್ಲಿ ಪಠ್ಯಕ್ರಮ ಮತ್ತು ಭೋಧನೆ ಎಂಬ ವಿಷಯದಲ್ಲಿ ಕಾರ್ಯಾಗಾರವನ್ನು ಶ್ರೀ ಡಾ| […]
ಜೇಸಿಯ ರಾಷ್ಟ್ರ ತರಬೇತುದಾರ ರಾಜೇಂದ್ರ ಭಟ್ ಬೆಳ್ಮಣ್ಣು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಹತ್ತನೇ ತರಗತಿಯ ಮಕ್ಕಳಿಗೆ ಪರೀಕ್ಷಾ ಪೂರ್ವ ತಯಾರಿ, ಪ್ರೇರಣೆ ಹಾಗೂ ಧನಾತ್ಮಕ ಯೋಚನೆಗಳ ಬಗ್ಗೆ ದಿನಾಂಕ ೧೨.೧೦.೨೦೧೨ ರಂದು ಕಾರ್ಯಾಗಾರ ನಡೆಸಿದರು. ಶಾಲಾ ಸಂಚಾಲಕರಾದ ಶ್ರೀ ರವೀಂದ್ರ.ಪಿ ಕಾರ್ಯಾಗಾರವನ್ನು ಉದ್ಫಾಟಿಸಿ ಶುಭ ಹಾರೈಸಿದರು. ಆಡಳಿತ ಮಂಡಳಿಯ ಸದಸ್ಯರಾದ ಡಾ.ಸುಲೇಖಾ ವರದರಾಜ್ , ಮುಖ್ಯಗುರುಗಳು , ಶಿಕ್ಷಕ ವೃಂದ ಉಪಸ್ಥಿತರಿದ್ದರು.